Isaiah 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.
Kannada BSI Bible 2016
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಆತನ ಭಯಂಕರತನಕ್ಕೂ ಅತ್ಯುನ್ನತಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ ಚೂಪಾದ ಶಿಲೆಗಳ ಸೀಳುಗಳಲ್ಲಿಯೂ ನುಗ್ಗುವರು.
Kannada Bible (KNCL) BSI 2016
ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ, ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಜನರು ನುಗ್ಗುವರು.