Isaiah 2:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.
Kannada BSI Bible 2016
ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
Kannada BSI JV (ಕನ್ನಡ ಸತ್ಯವೇದವು J.V. (BSI))
ಉಸಿರು ಮೂಗಿನಲ್ಲಿರುವ ತನಕ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಯಾವ ಗಣನೆಗೆ ಬಂದಾನು?
Kannada Bible (KNCL) BSI 2016
ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?