Isaiah 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
Kannada BSI Bible 2016
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.
Kannada Bible (KNCL) BSI 2016
ದೇಶವಿದೇಶಗಳವರು ಬಂದು ಹೇಳುವರು ಹೀಗೆ: “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.