Isaiah 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
Kannada BSI Bible 2016
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದೇಶದೇಶಗಳ ವ್ಯಾಜ್ಯಗಳನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ [ಆಯುಧಗಳನ್ನು] ಕುಲುಮೆಗೆ ಹಾಕಿ ಕತ್ತಿಗಳನ್ನು ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.
Kannada Bible (KNCL) BSI 2016
ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.