Isaiah 2:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಕೆಟ್ಟದಾರಿಯಲ್ಲಿ ಹೋಗುತ್ತಿದ್ದಾರೆ; ಹೀನಸ್ಥಿತಿಯಲ್ಲಿ ಮುಂದುವರಿಯುತ್ತಿದ್ದಾರೆ. ದೇವರೇ, ನೀನು ಅವರನ್ನು ಖಂಡಿತವಾಗಿಯೂ ಕ್ಷಮಿಸಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.
Kannada BSI Bible 2016
ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಅಧಮರಾಗಲಿ ಉತ್ತಮರಾಗಲಿ ತಗ್ಗಿಸಲ್ಪಡುವರು; (ಅವರನ್ನು ಕ್ಷವಿುಸಬೇಡ).
Kannada Bible (KNCL) BSI 2016
ಮಾನವನು ತಗ್ಗಿಹೋಗಿದ್ದಾನೆ, ಅಧೋಗತಿಗೆ ಇಳಿದಿದ್ದಾನೆ. ಸ್ವಾಮೀ, ಅವನಿಗೆ ಕ್ಷಮೆ ನೀಡಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಮನುಷ್ಯರು ನಮ್ರರಾಗುತ್ತಾರೆ; ಎಲ್ಲರೂ ತಲೆಬಾಗುತ್ತಾರೆ; ಅವರನ್ನು ಕ್ಷಮಿಸಬೇಡಿ.