Isaiah 20:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನು, “ಮೂರು ವರ್ಷಗಳ ತನಕ ನನ್ನ ಸೇವಕನಾದ ಯೆಶಾಯನು ಬಟ್ಟೆ ಇಲ್ಲದೆ, ಪಾದರಕ್ಷೆ ಇಲ್ಲದೆ ನಡೆದಾಡಿದ್ದಾನೆ. ಇದು ಈಜಿಪ್ಟಿಗೂ ಇಥಿಯೋಪ್ಯಕ್ಕೂ ಗುರುತಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.”
Kannada BSI Bible 2016
ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಹೀಗೆ ಹೇಳಿದನು - ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಸೋಜಿಗದ ಗುರುತಾಗಿ ಮೂರು ವರುಷ ಬಟ್ಟೆ ಕೆರಗಳಿಲ್ಲದೆ ನಡೆದ ಪ್ರಕಾರ
Kannada Bible (KNCL) BSI 2016
ಆಗ ಸರ್ವೇಶ್ವರ: “ನನ್ನ ದಾಸ ಯೆಶಾಯನು ಈಜಿಪ್ಟಿನ ಮತ್ತು ಸುಡಾನಿನ ವಿನಾಶಕ್ಕೆ ಸೋಜಿಗದ ಗುರುತಾಗಿ ಮೂರು ವರ್ಷ ಬಟ್ಟೆಯಿಲ್ಲದೆ ಬರಿಗಾಲಿನಲ್ಲಿ ತಿರುಗಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು, “ನನ್ನ ಸೇವಕನಾದ ಯೆಶಾಯನು ಈಜಿಪ್ಟ್ ಮತ್ತು ಕೂಷಿಗು, ಗುರುತಾಗಿಯೂ, ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.