Isaiah 20:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮುದ್ರ ತೀರದಲ್ಲಿ ವಾಸಿಸುವವರು ಹೀಗೆ ಹೇಳುವರು: “ಆ ದೇಶದವರು ನಮಗೆ ಸಹಾಯ ಮಾಡುವರೆಂದು ಅವರನ್ನು ನಂಬಿದೆವು. ಅಶ್ಶೂರದ ಅರಸನಿಂದ ನಮ್ಮನ್ನು ಕಾಪಾಡುವಂತೆ ನಾವು ಅವರ ಬಳಿಗೆ ಓಡಿಹೋದೆವು. ಆದರೆ ಈಗ ನೋಡಿ, ಆ ದೇಶದವರು ಸೋತು ಹೋಗಿ ವೈರಿವಶವಾಗಿದ್ದಾರೆ. ಈಗ ನಾವು ಪಾರಾಗಲು ಹೇಗೆ ಸಾಧ್ಯ?”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.
Kannada BSI Bible 2016
ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಈ ಕರಾವಳಿಯಲ್ಲಿ ವಾಸಿಸುವವರು - ಹಾ, ಅಶ್ಶೂರದ ಅರಸನಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೇ ಈ ಗತಿ ಬಂತಲ್ಲಾ; ನಮ್ಮಂಥವರಿಗೆ ಹೇಗೆ ರಕ್ಷಣೆಯಾದೀತು ಎಂದು ಅಂದುಕೊಳ್ಳುವರು.
Kannada Bible (KNCL) BSI 2016
ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”

Recommended Reading