Isaiah 21:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜುಗುಜ್ಜಾಗುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.
Kannada BSI Bible 2016
ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ, ಇಸ್ರಾಯೇಲ್ಯರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.
Kannada Bible (KNCL) BSI 2016
ನನ್ನ ಪ್ರಜೆಯೇ, ನನ್ನ ಕಣಜದ ದವಸವೇ, ಬಡಿತಕ್ಕೆ ಈಡಾದ ಜನರೇ, ಇಸ್ರಯೇಲರ ದೇವರಾದ ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯಿಂದ ನಾನು ಕೇಳಿದ್ದನ್ನೇ ತಿಳಿಸುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಣದಲ್ಲಿ ತುಳಿತಕ್ಕೆ ಈಡಾದ ನನ್ನ ಜನರೇ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.