Isaiah 21:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಈ ವಿಷಯಗಳು ಸಂಭವಿಸುವವೆಂದು ಹೇಳಿದನು. ಆತನು ಹೇಳಿದ್ದೇನೆಂದರೆ: “ಇನ್ನೊಂದು ವರ್ಷದಲ್ಲಿ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಕೇದಾರಿನ ಘನತೆಯೆಲ್ಲವೂ ಹೋಗಿ ಬಿಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವವು ಇಲ್ಲವಾಗುವುದು.
Kannada BSI Bible 2016
ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ನನಗೆ ಹೇಳಿರುವದೇನಂದರೆ - ಆಳಿನ ವರುಷ ವಾಯಿದೆಗೆ ಸರಿಯಾದ ಒಂದು ವರುಷಕ್ಕೇ ಕೇದಾರಿನ ಸಕಲ ವೈಭವವು ಇಲ್ಲವಾಗುವದು;
Kannada Bible (KNCL) BSI 2016
ಸರ್ವೇಶ್ವರ ನನಗೆ ಹೀಗೆಂದರು: “ಗುಲಾಮಗಿರಿಯ ವಾಯಿದೆಯ ಪ್ರಕಾರ, ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವ ಗತಿಸಿಹೋಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಕರ್ತರು ನನಗೆ ಹೀಗೆ ಹೇಳುತ್ತಾರೆ: “ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವುದು.