Isaiah 21:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
Kannada BSI Bible 2016
ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ; ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತು! ನಿಮ್ಮ ನಿಟ್ಟುಸುರನ್ನು ನಿಲ್ಲಿಸಿಬಿಟ್ಟಿದ್ದೇನೆ.
Kannada Bible (KNCL) BSI 2016
ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು! ಮೇದ್ಯವೇ, ಮುತ್ತಿಗೆ ಹಾಕು! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.