Isaiah 21:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.
Kannada BSI Bible 2016
ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದರ್ಶನದಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಯಾತನೆಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.
Kannada Bible (KNCL) BSI 2016
ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ. ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ. ಕಣ್ಣು ಕುರುಡಾಗುವಷ್ಟು ಭ್ರಾಂತನಾಗಿದ್ದೇನೆ.