Isaiah 21:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರಾದರೋ, “ಊಟ ಬಡಿಸಿರಿ! ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ. ಅದೇ ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, ಸೇನಾಪತಿಗಳೇ ಎದ್ದೇಳಿರಿ, ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ!
Kannada BSI Bible 2016
ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಔತಣಕ್ಕೆ ಸಿದ್ಧಪಡಿಸಿಕೊಂಡು ಚಾಪೆಗಳನ್ನು ಹಾಸಿಕೊಂಡು ಉಂಡು ಕುಡಿಯುತ್ತಿದ್ದಾರಲ್ಲಾ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ!
Kannada Bible (KNCL) BSI 2016
ಔತಣ ಸಿದ್ಧವಾಗಿದೆ, ಚಾಪೆ ಹಾಸಿದ್ದಾರೆ. ಅತಿಥಿಗಳು ಭೋಜನ ಮಾಡುತ್ತಾ ಕುಡಿಯುತ್ತಾ ಇದ್ದಾರೆ. ಇದೋ, ಇದ್ದಕ್ಕಿದ್ದಂತೆ ಕೂಗೊಂದು ಕೇಳಿಬರುತ್ತಿದೆ: “ಪ್ರಭುಗಳೇ, ಎದ್ದೇಳಿ, ಗುರಾಣಿಗಳನ್ನು ಅಣಿಗೊಳಿಸಿರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಔತಣ ಸಿದ್ಧವಾಗಿದೆ. ಬುರುಜಿನ ಮೇಲೆ ಕಾವಲಿರು. ಉಣ್ಣು, ಕುಡಿ, ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿರಿ.