Isaiah 21:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. ಆಗ ಒಬ್ಬ ದೂತನು, “ಬಾಬಿಲೋನಿಗೆ ಸೋಲಾಯಿತು. ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.
Kannada BSI Bible 2016
ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಸವಾರರು, ಜೋಡಿ ಜೋಡಿಯಾಗಿ ಬರುತ್ತಾರೆ ಎಂದು ಕೂಗಿ ಇನ್ನೂ ಹೇಳಿದ್ದೇನಂದರೆ - ಬಾಬೆಲ್ ಬಿತ್ತು, ಬಿತ್ತು! ಅದರ ದೇವತಾವಿಗ್ರಹಗಳನ್ನು ಒಡೆದು ನೆಲಸಮಮಾಡಿಬಿಟ್ಟರು ಎಂಬದೇ.
Kannada Bible (KNCL) BSI 2016
ಇಗೋ, ಸವಾರರು ಜೋಡಿಜೋಡಿಯಾಗಿ ಬರುತಿಹರು,” ಎಂದು ಕೂಗಿ ಹೇಳುತ್ತಿದ್ದಾನೆ. ಅನಂತರ ಅವನು, “ಬಾಬಿಲೋನ್ ಬಿದ್ದುಹೋಯಿತು. ಅದರ ಪೂಜಾ ವಿಗ್ರಹಗಳೆಲ್ಲ ಒಡೆದು ಬೀದಿಪಾಲಾಗಿವೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”