Isaiah 22:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರವನ್ನು ಧರಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
Kannada BSI Bible 2016
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು;
Kannada Bible (KNCL) BSI 2016
ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ: “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.