Isaiah 22:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಗೋ, ಈಗ ಜನರು ಸಂತೋಷಪಡುತ್ತಿದ್ದಾರೆ. ಅವರು ಹರ್ಷಿಸುತ್ತಾ: “ದನಕುರಿಗಳನ್ನು ಕೊಯ್ಯಿರಿ, ನಾವು ಹಬ್ಬ ಆಚರಿಸೋಣ, ಊಟಮಾಡಿ ದ್ರಾಕ್ಷಾರಸ ಕುಡಿಯೋಣ, ತಿಂದು, ಕುಡಿದು ಸಂತೋಷವಾಗಿರೋಣ. ಯಾಕೆಂದರೆ ನಾಳೆ ನಾವು ಸಾಯುವೆವು” ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.
Kannada BSI Bible 2016
ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಇಗೋ, ಉಲ್ಲಾಸ, ಹರ್ಷ, ದನಕೊಯ್ಯುವದು, ಕುರಿಕಡಿಯುವದು, ಮಾಂಸತಿನ್ನುವದು, ದ್ರಾಕ್ಷಾರಸ ಕುಡಿಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವದು [ಇವೇ ನಿಮ್ಮ ಕಾರ್ಯ].
Kannada Bible (KNCL) BSI 2016
ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಉತ್ಸಾಹವು, ಸಂತೋಷವು, ದನ ಕೊಳ್ಳುವುದು, ಕುರಿ ಕಡಿಯುವುದು, ಮಾಂಸವನ್ನು ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.