Isaiah 22:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.
Kannada BSI Bible 2016
ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗೆ ಗೋಚರಪಡಿಸಿದ್ದೇನಂದರೆ - ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ ಎಂಬದೇ.
Kannada Bible (KNCL) BSI 2016
ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ: “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ.