Isaiah 22:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು, “ಸೇವಕನಾದ ಶೆಬ್ನನ ಬಳಿಗೆ ಹೋಗು. ಅವನು ಅರಮನೆಯ ಮೇಲ್ವಿಚಾರಕನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,
Kannada BSI Bible 2016
ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ - ನಡೆ, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನಂದರೆ -
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೀಗೆ ನುಡಿದಿದ್ದಾರೆ: “ಹೋಗು, ಅರಮನೆಯ ಮೇಲ್ವಿಚಾರಕ ಶೆಬ್ನ ಎಂಬ ಅಧ್ಯಕ್ಷನಿಗೆ ಹೀಗೆಂದು ಹೇಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಪುನಃ ಹೀಗೆ ನುಡಿದಿದ್ದಾರೆ: “ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನ ಎಂಬ ಖಜಾಂಚಿಯ ಬಳಿಗೆ ಹೋಗಿ ಹೀಗೆ ಹೇಳು: