Isaiah 22:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮನುಷ್ಯನೇ, ಯೆಹೋವನು ನಿನ್ನನ್ನು ಧ್ವಂಸ ಮಾಡುವನು. ಆತನು ನಿನ್ನನ್ನು ಚೆಂಡಿನಂತೆ ಉರುಳಿಸಿ ಬಹುದೂರಕ್ಕೆ ಅಂದರೆ ಬೇರೊಂದು ದೇಶದ ತೆರೆದ ತೋಳುಗಳಿಗೆ ಎಸೆದುಬಿಡುವನು. ಅಲ್ಲಿ ನೀನು ಸಾಯುವೆ” ಎಂದು ಹೇಳಿದನು. ಅದಕ್ಕೆ ಯೆಹೋವನು, “ನೀನು ನಿನ್ನ ರಥಗಳಲ್ಲಿ ಹೆಚ್ಚಳಪಡುತ್ತಿರುವೆ. ಆದರೆ ಆ ದೂರದೇಶದಲ್ಲಿರುವ ನಿನ್ನ ಹೊಸ ಅರಸನ ಬಳಿಯಲ್ಲಿ ಇದಕ್ಕಿಂತಲೂ ಶ್ರೇಷ್ಠವಾದ ರಥಗಳಿವೆ. ಅವನ ಅರಮನೆಯಲ್ಲಿ ನಿನ್ನ ರಥಗಳು ಮುಖ್ಯವಾದವುಗಳಾಗಿರುವುದಿಲ್ಲ. (Verses 17-18)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು.
Kannada BSI Bible 2016
ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಬಲಿತವನೇ, ಯೆಹೋವನು ನಿನ್ನನ್ನು ಎಸೆದೇ ಎಸೆಯುವನು, ಹಿಡಿದೇ ಹಿಡಿಯುವನು;
Kannada Bible (KNCL) BSI 2016
ಎಲೈ ಬಲಾಢ್ಯನೇ, ಸರ್ವೇಶ್ವರ ನಿನ್ನನ್ನು ಬಿಗಿಹಿಡಿದು ದೂರಕ್ಕೆಸೆಯುವರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯುವರು.