Isaiah 22:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಂದಿನ ಕಾಲದಲ್ಲಿ ಈ ನಗರವು ಅತ್ಯಂತ ಜನಸಂದಣಿಯಿಂದ ಕೂಡಿತ್ತು. ಈ ನಗರದಲ್ಲಿ ಗದ್ದಲವೂ ಜನರ ಸಂತಸದ ಧ್ವನಿಯೂ ತುಂಬಿತ್ತು. ಆದರೆ ಈಗ ಎಲ್ಲವೂ ಬದಲಾಯಿತು. ನಿಮ್ಮ ಜನರು ಸತ್ತದ್ದು ಖಡ್ಗದಿಂದಲ್ಲ. ಯುದ್ಧದಲ್ಲಿ ಸಾಯದೆ ಬೇರೆ ರೀತಿಯಲ್ಲಿ ಸತ್ತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.
Kannada BSI Bible 2016
ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಊರೇ! ನಿನ್ನಲ್ಲಿ ಹತರಾದವರು ಖಡ್ಗಹತರಲ್ಲ, ಯುದ್ಧದಲ್ಲಿ ಮೃತರಲ್ಲ.
Kannada Bible (KNCL) BSI 2016
ಊರಿಗೆ ಊರೇ ಆರ್ಭಟಿಸುತ್ತಿರುವಂತಿದೆ! ಯುದ್ಧದಲ್ಲಿ ಸತ್ತ ನಿಮ್ಮ ಯೋಧರೆಲ್ಲ ಕಾದಾಟದಿಂದ ಮಡಿದವರಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಹತರಾದವರು ಖಡ್ಗದಿಂದ ಹತರಾದವರಲ್ಲ; ಯುದ್ಧದಲ್ಲಿ ಸತ್ತವರೂ ಅಲ್ಲ.