Isaiah 22:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ತಂದೆಯ ಮನೆಯ ಎಲ್ಲಾ ವಿಶೇಷ ಸಂಗತಿಗಳನ್ನು, ವಸ್ತುಗಳನ್ನು ಅವನಿಗೆ ತೂಗುಹಾಕುವರು. ಎಲ್ಲಾ ಹಿರಿಕಿರಿಯರು ಅವನ ಮೇಲೆ ಆತುಕೊಂಡಿರುವರು. ಅವರು ಅವನಿಗೆ ತೂಗುಹಾಕಲ್ಪಟ್ಟ ಚಿಕ್ಕಚಿಕ್ಕ ಪಾತ್ರೆಗಳಂತೆಯೂ ನೀರಿನ ದೊಡ್ಡ ಸೀಸೆಗಳಂತೆಯೂ ಇರುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು” ಎಂಬುದೇ.
Kannada BSI Bible 2016
ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣಪಾತ್ರೆಗಳನ್ನು ಅಂದರೆ ತಂದೆಯ ಸಂತಾನ ಸಂತತಿಯಾದ ಅವನ ವಂಶದ ಭಾರವನ್ನೆಲ್ಲಾ ಅವನಿಗೆ ತಗಲುಹಾಕುವರು.
Kannada Bible (KNCL) BSI 2016
“ಬಟ್ಟಲು, ಬಿಂದಿಗೆ ಮುಂತಾದ ಪಾತ್ರೆಗಳನ್ನು ಮೊಳೆಗೆ ತಗಲುಹಾಕುವಂತೆ, ತಂದೆಯ ಮಕ್ಕಳು, ಮೊಮ್ಮಕ್ಕಳೆಲ್ಲರು ಅವನಿಗೆ ನೇತುಬೀಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಟ್ಟಲು ಮೊದಲುಗೊಂಡು ಕೊಡದ ತನಕ, ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿಸುವರು.