Isaiah 22:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಆ ಮೊಳೆಯು (ಶೆಬ್ನ) ಬಲಹೀನವಾಗಿ ತುಂಡಾಗುವದು. ಆ ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವದು. ಆಗ ಆ ಮೊಳೆಗೆ ತೂಗುಹಾಕಿದ್ದೆಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವದು. ಆಗ ನಾನು ಈ ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವದು. ಅವುಗಳು ನೆರವೇರುತ್ತವೆ ಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ.
Kannada BSI Bible 2016
ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ಹೇಳುವದೇನಂದರೆ - ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದಕ್ಕೆ ತಗಲುಹಾಕಿದ ಭಾರವೂ ನಾಶವಾಗುವದು. ಇದೇ ಯೆಹೋವನಾದ ನನ್ನ ನುಡಿ ಎಂಬದೇ.
Kannada Bible (KNCL) BSI 2016
ಇದರಿಂದ ಬಿಗಿಯಾಗಿ ಹೊಡೆಯಲಾಗಿದ್ದ ಆ ಮೊಳೆ ಸಡಿಲವಾಗಿ ಕುಸಿದುಬೀಳುವುದು. ಅದಕ್ಕೆ ತಗಲುಹಾಕಿದ್ದ ವಸ್ತುಗಳೆಲ್ಲ ಕಳಚಿಬೀಳುವುವು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೇಳಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದಿನದಲ್ಲಿ,” ಸೇನಾಧೀಶ್ವರ ಯೆಹೋವ ದೇವರು ಪ್ರಕಟಿಸುವುದು ಏನೆಂದರೆ, “ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಕುಸಿದುಬೀಳುವುದು. ಮೊಳೆಯ ಮೇಲೆ ಇದ್ದ ಭಾರವೂ ತೆಗೆದುಹಾಕಲಾಗುವುದು,” ಇದು ಯೆಹೋವ ದೇವರ ನುಡಿ.