Isaiah 22:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಧಿಪತಿಗಳೆಲ್ಲಾ ಒಟ್ಟಾಗಿ ಪಲಾಯನಗೈದರು. ಆದರೆ ಅವರೆಲ್ಲಾ ಬಿಲ್ಲುಗಳಿಲ್ಲದೆ ಹಿಡಿಯಲ್ಪಟ್ಟರು. ನಿಮ್ಮ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಬಹು ದೂರಪ್ರದೇಶಗಳಿಗೆ ಓಡಿದರು. ಆದರೆ ಅವರೆಲ್ಲಾ ಹಿಡಿಯಲ್ಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ; ದೂರದಿಂದ ಓಡುತ್ತಾ ಶತ್ರುವಿಗೆ ಸಿಕ್ಕಿದ ನಿನ್ನ ಜನರೆಲ್ಲರೊಂದಿಗೆ ಕಟ್ಟುಬಿದ್ದಿದ್ದಾರೆ.
Kannada BSI Bible 2016
ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲಿಲ್ಲದೆ ಸೆರೆಯಾಗಿದ್ದಾರೆ; ದೂರ ಓಡುತ್ತಾ [ಶತ್ರುವಿಗೆ] ಸಿಕ್ಕಿದ ನಿನ್ನ ಜನರೆಲ್ಲರೂ ಒಂದಿಗೆ ಕಟ್ಟುಬಿದ್ದಿದ್ದಾರೆ.
Kannada Bible (KNCL) BSI 2016
ನಿಮ್ಮ ಮುಖಂಡರೆಲ್ಲ ಒಟ್ಟಿಗೆ ಪಲಾಯನಗೈದರು; ಒಂದೇ ಒಂದು ಬಾಣವನ್ನು ಬಿಡುವುದಕ್ಕೆ ಮುಂಚೆ ಸೆರೆಹೋದರು. ದೂರಕ್ಕೆ ಪಲಾಯನಗೈದಿದ್ದರೂ ಅವರೆಲ್ಲರೂ ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಅಧಿಕಾರಸ್ಥರೆಲ್ಲ ಒಟ್ಟಿಗೆ ಓಡಿದರೂ ಬಿಲ್ಲುಗಾರರಿಲ್ಲದೆಯೇ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದರೂ ನಿನ್ನ ಜನರು ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.