Isaiah 22:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು ಹೇಳುವುದೇನೆಂದರೆ: “ನೀವು ನನ್ನ ಕಡೆಗೆ ನೋಡಬೇಡಿ! ನನ್ನನ್ನು ಅಳಲು ಬಿಡಿರಿ! ಜೆರುಸಲೇಮಿನ ನಾಶನದ ಕುರಿತಾಗಿ ನನ್ನನ್ನು ಕೂಡಲೇ ಸಂತೈಸಬೇಡಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.
Kannada BSI Bible 2016
ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
Kannada Bible (KNCL) BSI 2016
“ಆದ್ದರಿಂದ ನನ್ನ ಕಡೆ ನೋಡಬೇಡಿ. ನನ್ನನ್ನು ಸಂತೈಸಲು ಪ್ರಯತ್ನಿಸಬೇಡಿ. ಸತ್ತುಹೋದ ನನ್ನ ಜನರಿಗಾಗಿ ಕಣ್ಣೀರು ಸುರಿಸುತ್ತಿರುವೆನು” ಎಂದೆ ನಾನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲು ನಾನು ಹೀಗೆ ಹೇಳಿದೆನು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹು ಸಂಕಟದಿಂದ ನಾನು ಅಳುವೆನು. ಏಕೆಂದರೆ ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.”