Isaiah 22:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದ ನಗರದ ಕೋಟೆಗೋಡೆಗಳಲ್ಲಿ ಬಿರುಕುಗಳು ಉಂಟಾಗುವವು. ಆ ಬಿರುಕುಗಳನ್ನು ನೀವು ಸ್ಪಷ್ಟವಾಗಿ ಕಾಣಬಹುದು. ಅದರೊಳಗಿರುವ ಮನೆಗಳನ್ನು ಲೆಕ್ಕ ಮಾಡಬಹುದು. ಆ ಮನೆಗಳ ಕಲ್ಲುಗಳನ್ನು ತೆಗೆದು ಬಿರುಕು ಮುಚ್ಚಲಾಗುವದು. ಎರಡು ಸಾಲು ಕೋಟೆಗೋಡೆಗಳ ಮಧ್ಯದಲ್ಲಿ ಹಳೆಯ ಕಾಲಿವೆಯ ಮೂಲಕ ನೀರನ್ನು ತರಿಸಿ ಆ ನೀರನ್ನು ಉಳಿತಾಯ ಮಾಡುವಿರಿ. ಇವೆಲ್ಲವನ್ನು ನೀವು ನಿಮ್ಮನ್ನು ಸಂರಕ್ಷಿಸಿಕೊಳ್ಳುವದಕ್ಕೋಸ್ಕರ ಮಾಡುವಿರಿ. ಆದರೆ ಇವೆಲ್ಲವನ್ನು ನಿರ್ಮಿಸಿದ ದೇವರ ಮೇಲೆ ನೀವು ನಂಬಿಕೆ ಇಡುವದಿಲ್ಲ. ಇದನ್ನು ಬಹಳ ಕಾಲದ ಹಿಂದೆ ನಿರ್ಮಿಸಿದ ದೇವರನ್ನು ನೀವು ನೋಡುವದಿಲ್ಲ. (Verses 9-11)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.
Kannada BSI Bible 2016
ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.
Kannada Bible (KNCL) BSI 2016
ದಾವೀದನ ಕೋಟೆಯ ಬಿರುಕುಗಳು ಬಹಳವೆಂಬುದನ್ನು ಗಮನಿಸಿದಿರಿ. ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ. ಕೆಳಗಿನ ಕೊಳಕ್ಕೆ ನೀರನ್ನು ತುಂಬಿಸುತ್ತೀರಿ.