Isaiah 23:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತೂರಿನ ವಿಷಯವಾಗಿ ದುಃಖಕರವಾದ ಸಂದೇಶ: “ತಾರ್ಷೀಷಿನ ಹಡಗುಗಳೇ, ದುಃಖಿಸಿರಿ! ನಿಮ್ಮ ರೇವು ಕೆಡವಲ್ಪಟ್ಟಿದೆ.” ಕಿತ್ತಿಮಿನಿಂದ ಹೊರಟ ಹಡಗುಗಳಿಗೆ ಈ ವಾರ್ತೆಯು ತಲುಪಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
Kannada BSI Bible 2016
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ! [ನಿಮ್ಮ ಆಶ್ರಯವು] ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. (ಕಿತ್ತೀಮ್ ದೇಶೀಯರಿಂದ ಅವುಗಳಿಗೆ ತಿಳಿಯಿತು).
Kannada Bible (KNCL) BSI 2016
ಟೈರ್ ನಗರವನ್ನು ಕುರಿತ ದೈವೋಕ್ತಿ: “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.