Isaiah 23:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಸಮುದ್ರದ ಮೇಲೆ ತನ್ನ ಕೈಯನ್ನು ಚಾಚಿದ್ದಾನೆ. ಆತನು ತೂರಿಗೆ ವಿರುದ್ಧವಾಗಿ ಯುದ್ಧಮಾಡಲು ರಾಜ್ಯಗಳನ್ನು ಒಟ್ಟುಗೂಡಿಸುತ್ತಾನೆ. ಯೆಹೋವನು ಕಾನಾನಿಗೆ ತೂರಿನ ಆಶ್ರಯಸ್ಥಳಗಳನ್ನು ನಾಶಮಾಡಲು ಆಜ್ಞಾಪಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.
Kannada BSI Bible 2016
ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್‌) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಅಪ್ಪಣೆಕೊಟ್ಟಿದ್ದಾನೆ;
Kannada Bible (KNCL) BSI 2016
ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಅವರು ವ್ಯಾಪಾರದ ಪಟ್ಟಣವನ್ನು ಕಾನಾನಿನ ದುರ್ಗಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾರೆ.