Isaiah 23:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ತೂರಿನ ಜನರು ಹೀಗೆನ್ನುವರು: ‘ಬಾಬಿಲೋನಿನವರು ನಮಗೆ ಸಹಾಯಮಾಡುವರು.’ ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.
Kannada BSI Bible 2016
ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು; ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು; ಬುರುಜುಗಳನ್ನು ಕಟ್ಟಿಕೊಂಡು ಇದರ ಕೋಟೆಗಳನ್ನು ಕೆಡವಿ ಇದನ್ನು ನಾಶಪಡಿಸಿದರು.
Kannada Bible (KNCL) BSI 2016
ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು ಕಾಡುಮೃಗಗಳಿಗೆ ಈಡು ಮಾಡುವ ತನಕ ಈ ಜನರು ಇರಲಿಲ್ಲ. ಗೋಪುರಗಳನ್ನು ಕಟ್ಟಿಸಿಕೊಂಡು ಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ.