Isaiah 23:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಪ್ಪತ್ತು ವರ್ಷಗಳ ತನಕ ಜನರಿಗೆ ತೂರಿನ ಜ್ಞಾಪಕವಿರುವದಿಲ್ಲ. ಇದು ಒಬ್ಬ ಅರಸನು ಆಳುವ ಕಾಲ. ಎಪ್ಪತ್ತು ವರ್ಷಗಳ ತರುವಾಯ ತೂರ್ ಈ ಹಾಡಿನಲ್ಲಿರುವ ವೇಶ್ಯೆಯಂತಿರುವದು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.
Kannada BSI Bible 2016
ಆ ದಿವಸದಲ್ಲಿ ಆಗುವದೇನಂದರೆ, ತೂರ್‌ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್‌ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ತೂರ್‍ಪಟ್ಟಣವು ಒಬ್ಬ ರಾಜನ ಆಡಳಿತದ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷದ ಮೇಲೆ ಸೂಳೆಯ ವಿಷಯವಾದ ಗೀತದಂತಾಗುವದು.
Kannada Bible (KNCL) BSI 2016
ಒಬ್ಬ ಅರಸನ ಜೀವಮಾನ ಕಾಲದಷ್ಟು ದಿನ - ಅಂದರೆ ಎಪ್ಪತ್ತು ವರ್ಷಕಾಲ - ನಗರವು ಯಾರ ನೆನಪಿಗೂ ಬಾರದೆಹೋಗುವುದು. ಆ ಅವಧಿಯು ಮುಗಿದ ಮೇಲೆ ಅದರ ಗತಿ ವೇಶ್ಯೆಯ ಗೀತದಂತಾಗುವುದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸದಲ್ಲಿ ಟೈರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೆ ಇರುವುದು. ಎಪ್ಪತ್ತು ವರ್ಷಗಳ ಕೊನೆಯಲ್ಲಿ ಟೈರ್ ಪಟ್ಟಣವು ವೇಶ್ಯೆಯ ವಿಷಯವಾದ ಈ ಗೀತೆಯ ಹಾಗಾಗುವುದು: