Isaiah 23:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪುರುಷರು ಮರೆತಿರುವ ವೇಶ್ಯೆಯೇ, ನಿನ್ನ ಕಿನ್ನರಿಯನ್ನು ತೆಗೆದುಕೊಂಡು ಊರೊಳಗೆ ಹೋಗಿ ನಿನ್ನ ಹಾಡನ್ನು ನುಡಿಸು, ಮತ್ತೆಮತ್ತೆ ಹಾಡು. ಆಗ ಯಾರಾದರೂ ನಿನ್ನನ್ನು ನೆನಪುಮಾಡಿಕೊಳ್ಳಬಹುದೇನೋ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ, ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ.
Kannada BSI Bible 2016
ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇನಂದರೆ ಎಲ್ಲರೂ ಮರೆತ ಸೂಳೆಯೇ, ಕಿನ್ನರಿಯನ್ನು ತೆಗೆದುಕೊಂಡು ಊರಲ್ಲಿ ಅಲೆಯುತ್ತಾ ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ ಬಹು ಗೀತಗಳನ್ನು ಹಾಡು ಎಂಬದೇ.
Kannada Bible (KNCL) BSI 2016
‘ಓ ವೇಶ್ಯೆಯೇ, ಮರೆತಿಹರು, ನೋಡು, ಜನರು ನಿನ್ನನು; ಎಂದೇ ತೆಗೆದುಕೋ ಕೈಯಲಿ ಕಿನ್ನರಿಯನು: ನುಡಿಸು ಇಂಪಾಗಿ ನಿನ್ನ ವಾದ್ಯವನು; ಹಾಡು ಅನೇಕಾನೇಕ ಗೀತಗಳನು; ಆಗಲಾದರೂ ನೆನಸಿಕೊಳ್ಳಲಿ ಜನರು ನಿನ್ನನು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮರೆತುಹೋದ ವೇಶ್ಯೆಯೇ, ಕಿನ್ನರಿಯನ್ನು ತೆಗೆದುಕೋ. ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು.”