Isaiah 23:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಪ್ಪತ್ತು ವರ್ಷಗಳ ನಂತರ ಯೆಹೋವನು ತೂರಿನ ಕುರಿತು ಮತ್ತೆ ಆಲೋಚಿಸಿ ತೀರ್ಮಾನಿಸುವನು. ತೂರಿನಲ್ಲಿ ವ್ಯಾಪಾರವು ಮತ್ತೆ ಪ್ರಾರಂಭವಾಗುವದು. ಅದು ಲೋಕದ ಎಲ್ಲಾ ರಾಜ್ಯಗಳಿಗೆ ವೇಶ್ಯೆಯಂತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.
Kannada BSI Bible 2016
ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಪ್ಪತ್ತು ವರುಷಗಳ ಮೇಲೆ ಯೆಹೋವನು ತೂರ್ ಎಂಬವಳಿಗೆ ನೇವಿುಸಲು ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಮಂಡಲದಲ್ಲಿ ಲೋಕದ ಸಕಲ ರಾಜ್ಯಗಳೊಂದಿಗೆ ಕಲೆಯುವಳು.
Kannada Bible (KNCL) BSI 2016
ಎಪ್ಪತ್ತು ವರ್ಷಗಳಾದ ಮೇಲೆ ಸರ್ವೇಶ್ವರ ಟೈರಿಗೆ ಭೇಟಿನೀಡುವರು. ಆ ನಗರಿ ತನ್ನ ಕಸುಬಿಗೆ ಹಿಂದಿರುಗುವಳು. ಜಗದ ಎಲ್ಲ ರಾಷ್ಟ್ರಗಳೊಂದಿಗೆ ವ್ಯಾಪಾರ ಗೈಯುವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಪ್ಪತ್ತು ವರುಷಗಳಾದ ಮೇಲೆ ಯೆಹೋವ ದೇವರು ಟೈರನ್ನು ಪರಾಮರಿಸುವರು. ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದವರಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ವ್ಯಾಪಾರ ಮಾಡುವುದು.