Isaiah 23:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆಕೆ ತಾನು ಗಳಿಸಿದ ಹಣವನ್ನು ತನ್ನಲ್ಲಿ ಇಟ್ಟುಕೊಳ್ಳುವದಿಲ್ಲ. ತೂರ್ ತನ್ನ ವ್ಯಾಪಾರದಲ್ಲಿ ಗಳಿಸಿದ ಲಾಭವನ್ನು ಯೆಹೋವನಿಗಾಗಿ ಶೇಖರಿಸಿಟ್ಟಿದ್ದಾಳೆ. ಯೆಹೋವನನ್ನು ಸೇವಿಸುವವರಿಗೆ ಆ ಲಾಭವನ್ನು ಮೀಸಲಾಗಿಟ್ಟಿದ್ದಾಳೆ. ಹೀಗೆ ಯೆಹೋವನ ಸೇವಕರು ಹೊಟ್ಟೆತುಂಬ ಊಟಮಾಡುವರು, ಒಳ್ಳೆಯ ಬಟ್ಟೆ ಧರಿಸಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.
Kannada BSI Bible 2016
(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳ ವ್ಯಾಪಾರವೂ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವದು; ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲಿಸುವದು.
Kannada Bible (KNCL) BSI 2016
ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಯೆಹೋವ ದೇವರಿಗೆ ಪರಿಶುದ್ಧವಾಗುವುದು. ಅವಳ ಆದಾಯವು ಯೆಹೋವ ದೇವರ ಸನ್ನಿಧಾನದಲ್ಲಿ ವಾಸಿಸುವವರೆಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.