Isaiah 23:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೀದೋನೇ, ನೀನು ತುಂಬಾ ದುಃಖದಿಂದಿರಬೇಕು. ಯಾಕೆಂದರೆ ಸಮುದ್ರವೂ ಸಮುದ್ರದ ಕೋಟೆಯೂ ಹೇಳುವುದೇನೆಂದರೆ, “ನನಗೆ ಮಕ್ಕಳಿಲ್ಲ, ನಾನು ಪ್ರಸವವೇದನೆ ಅನುಭವಿಸಲಿಲ್ಲ. ನಾನು ಮಕ್ಕಳನ್ನು ಹೆರಲಿಲ್ಲ. ನಾನು ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಬೆಳೆಸಲಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ.
Kannada BSI Bible 2016
ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀದೋನೇ, ನಾಚಿಕೆಪಡು; ಸಮುದ್ರವು, ಸಮುದ್ರದುರ್ಗವು - ನಾವು ವೇದನೆಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿಯುವಕರನ್ನು ಸಾಕಿ ಸಲಹಲಿಲ್ಲ ಎಂದು ನುಡಿದಿದೆಯಷ್ಟೆ.
Kannada Bible (KNCL) BSI 2016
ಸಿದೋನ್ ನಗರವೇ, ನಿನಗೆ ನಾಚಿಕೆಗೇಡು! ಸಮುದ್ರವೂ ಸಮುದ್ರ ತಳವೂ ನಿನ್ನನ್ನು ನಿರಾಕರಿಸುತ್ತಾ; “ನಾನು ಗರ್ಭಧರಿಸಲಿಲ್ಲ, ಪ್ರಸವಿಸಲಿಲ್ಲ, ಪುತ್ರಪುತ್ರಿಯರನ್ನು ಸಾಕಿ ಸಲಹಲಿಲ್ಲ,” ಎಂದು ನುಡಿದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀದೋನೇ ಮತ್ತು ಸಮುದ್ರದ ಕೋಟೆಯೇ ನಾಚಿಕೆಪಡಿರಿ. ಏಕೆಂದರೆ ಇದೇ ಸಮುದ್ರದ ಘೋಷಣೆಯಾಗಿದೆ: “ನಾವು ಪ್ರಸವವೇದನೆ ಪಡುವುದಿಲ್ಲ, ಹೆರುವುದಿಲ್ಲ, ಇಲ್ಲವೆ ಪುತ್ರಪುತ್ರಿಯರನ್ನು ಸಾಕಿ ಸಲಹುವುದಿಲ್ಲ,”