Isaiah 24:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಗೋ, ಯೆಹೋವನು ಈ ದೇಶವನ್ನು ನಾಶಮಾಡುವನು. ಆತನು ಅದನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವನು. ಜನರನ್ನು ಅತಿದೂರಕ್ಕೆ ಚದರಿಸಿಬಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.
Kannada BSI Bible 2016
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಯೆಹೋವನು ಲೋಕವನ್ನು ಬರಿದುಮಾಡಿ ಹಾಳಿಗೆ ತಂದು ವಿರೂಪಪಡಿಸಿ ಅದರ ನಿವಾಸಿಗಳನ್ನು ಚದರಿಸಿಬಿಡುವವನಾಗಿದ್ದಾನೆ.
Kannada Bible (KNCL) BSI 2016
ಇಗೋ, ಸರ್ವೇಶ್ವರ ಬರಿದುಮಾಡುವರು ಧರೆಯನು, ನಿರ್ಜನ ಪ್ರದೇಶವಾಗಿಸುವರು ವಿರೂಪಗೊಳಿಸಿ ಅದನು, ಚದರಿಸುವರು ಅದರ ನಿವಾಸಿಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಯೆಹೋವ ದೇವರು ಭೂಮಿಯನ್ನು ಬರಿದುಮಾಡಿ, ನಿರ್ಜನ ಪ್ರದೇಶವನ್ನಾಗಿ ಮಾಡಿ, ತಲೆಕೆಳಗಾಗಿ ತಿರುಗಿಸಿ, ಅದರ ನಿವಾಸಿಗಳನ್ನು ಚದರಿಸಿಬಿಡುವವರಾಗಿದ್ದಾರೆ.