Isaiah 24:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.
Kannada BSI Bible 2016
ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸದ್ಧರ್ಮಿಗಳಿಗೆ ಮಾನವಾಗಲೆಂಬ ಗೀತಗಳು ಭೂಮಂಡಲದ ಕಟ್ಟಕಡೆಯಿಂದ ನಮಗೆ ಕೇಳಬಂದಿವೆ. ನಾನಾದರೋ - ಕ್ಷಯಿಸೇ ಕ್ಷಯಿಸುತ್ತೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ ಎಂದುಕೊಂಡೆನು.
Kannada Bible (KNCL) BSI 2016
ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”