Isaiah 24:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಅಪಾಯದ ವಿಷಯ ಕೇಳಿ ಭಯಗ್ರಸ್ಥರಾಗುವರು. ಕೆಲವರು ಓಡಿಹೋಗುವರು. ಆದರೆ ಅವರು ಗುಂಡಿಯೊಳಗೆ ಬಿದ್ದು ಸಿಕ್ಕಿಕೊಳ್ಳುವರು. ಅವರಲ್ಲಿ ಕೆಲವರು ಗುಂಡಿಯಿಂದ ಹೊರಬರುವರು, ಆದರೆ ಅವರು ಇನ್ನೊಂದು ಉರುಲಿನೊಳಗೆ ಸಿಕ್ಕಿಹಾಕಿಕೊಳ್ಳುವರು. ಆಕಾಶದಲ್ಲಿರುವ ಪ್ರವಾಹದ ದ್ವಾರಗಳು ತೆರೆಯಲ್ಪಡುವವು. ಪ್ರವಾಹವು ತುಂಬುವದು; ಭೂಮಿಯ ಅಸ್ತಿವಾರಗಳು ಕದಲುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.
Kannada BSI Bible 2016
ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
Kannada BSI JV (ಕನ್ನಡ ಸತ್ಯವೇದವು J.V. (BSI))
ಭಯದ ಸಪ್ಪಳದಿಂದ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂವಿುಯ ಅಸ್ತಿವಾರಗಳು ಕಂಪಿಸುತ್ತಿವೆ.
Kannada Bible (KNCL) BSI 2016
ಬೀಳುವನು ಕುಳಿಯಲ್ಲಿ, ಭಯಭೀತಿಯ ಸಪ್ಪಳಕ್ಕೆ ಓಡಿಹೋಗುವವನು, ಸಿಕ್ಕಿಬೀಳುವನು ಬಲೆಯಲ್ಲಿ ಕುಳಿಯ ಹತ್ತಿ ಬರುವವನು. ತೆರೆದಿವೆ ನೋಡಿ, ಆಕಾಶದ ದ್ವಾರಗಳು, ಕಂಪಿಸುತ್ತಿವೆ ಬುವಿಯ ಅಸ್ತಿವಾರಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಭಯದ ಶಬ್ದಕ್ಕೆ ಓಡಿಹೋಗುವವನು ಗುಂಡಿಯೊಳಗೆ ಬೀಳುವನು. ಗುಂಡಿಯೊಳಗಿಂದ ಏರಿಬರುವವನು ಬಲೆಗೆ ಸಿಕ್ಕಿಬೀಳುವನು. ಆಕಾಶದ ದ್ವಾರಗಳು ತೆರೆದಿವೆ. ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.