Isaiah 24:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೋಕದ ಪಾಪವು ತುಂಬಾ ಭಾರವಾಗಿದೆ. ಆ ಭಾರದಿಂದಾಗಿ ಭೂಮಿಯು ಬೀಳುವದು. ಒಂದು ಹಳೆಯ ಮನೆಯಂತೆ ಭೂಮಿಯು ಅಲುಗಾಡುವದು. ಕುಡಿದು ಮತ್ತನಾಗಿ ನೆಲಕ್ಕೆ ಬೀಳುವವನಂತೆ ಭೂಮಿಯು ಇರುವದು. ಭೂಮಿಗೆ ಮುಂದುವರಿಯಲು ಆಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ.
Kannada BSI Bible 2016
ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯು ಅಮಲೇರಿದವನ ಹಾಗೆ ಓಲಾಡುತ್ತದೆ, ಮಂಚಿಕೆಯಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರಿಗಿ ಏಳುವದೇ ಇಲ್ಲ.
Kannada Bible (KNCL) BSI 2016
ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯು ಕುಡುಕನ ಹಾಗೆ ಓಲಾಡುತ್ತದೆ, ಗಾಳಿಗೆ ಸಿಕ್ಕಿದ ಗುಡಿಸಲಿನ ಹಾಗೆ ತೂಗಾಡುತ್ತದೆ, ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ, ಅದು ಬಿದ್ದು ಹೋಗುತ್ತದೆ, ತಿರುಗಿ ಏಳುವುದೇ ಇಲ್ಲ.