Isaiah 24:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನೇಕ ಮಂದಿ ಒಟ್ಟು ಸೇರುವರು. ಕೆಲವರು ಗುಂಡಿಯಲ್ಲಿ ಸಿಕ್ಕಿಹಾಕಿಕೊಳ್ಳುವರು. ಕೆಲವರು ಸೆರೆಹಿಡಿಯಲ್ಪಡುವರು. ಆಮೇಲೆ ಸ್ವಲ್ಪ ಕಾಲದ ನಂತರ ಅವರ ನ್ಯಾಯವಿಚಾರಣೆ ನಡಿಯುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು. ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು.
Kannada BSI Bible 2016
ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಬಂದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಿಸಿಕೊಂಡು ಅದರಲ್ಲಿ ಮುಚ್ಚಲ್ಪಟ್ಟಿದ್ದು ಬಹು ದಿನಗಳ ಮೇಲೆ ದಂಡನೆಗೆ ಗುರಿಯಾಗುವರು.
Kannada Bible (KNCL) BSI 2016
ತಳ್ಳುವವರನು ಖೈದಿಗಳ ಗುಂಪಿನಂತೆ ನೆಲಮಾಳಿಗೆಗೆ, ಇರುವರವರು ಸೆರೆಯಲಿ ಬಹುದಿನಗಳವರೆಗೆ, ತದನಂತರ ಗುರಿಯಾಗುವರು ದಂಡನೆಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆಲಮಾಳಿಗೆಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಬಹಳ ದಿನಗಳಿದ್ದ ತರುವಾಯ ದಂಡನೆಗೆ ಗುರಿಯಾಗುವರು.