Isaiah 24:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.
Kannada BSI Bible 2016
ಆಮೇಲೆ ಚೀಯೋನ್‌ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.
Kannada Bible (KNCL) BSI 2016
ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.