Isaiah 24:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
Kannada BSI Bible 2016
ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ ನಿಯಮವನ್ನು ಅತಿಕ್ರವಿುಸಿ ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂವಿುಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
Kannada Bible (KNCL) BSI 2016
ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.