Isaiah 24:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದ್ರಾಕ್ಷಿಬಳ್ಳಿಗಳು ಸಾಯುತ್ತಲಿವೆ. ಹೊಸ ದ್ರಾಕ್ಷಾರಸವು ಹುಳಿಯಾಗಿದೆ. ಹಿಂದಿನ ಕಾಲದಲ್ಲಿ ಜನರು ಹರ್ಷಭರಿತರಾಗಿದ್ದರು. ಆದರೆ ಈಗ ಆ ಜನರು ದುಃಖದಲ್ಲಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ.
Kannada BSI Bible 2016
ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರಾಕ್ಷಾರಸವು ವ್ಯಸನಭರಿತವಾಗಿದೆ, ದ್ರಾಕ್ಷೆಯ ಬಳ್ಳಿಯು ಬಾಡಿದೆ, ಹರ್ಷಹೃದಯರೆಲ್ಲಾ ನರಳುತ್ತಾರೆ.
Kannada Bible (KNCL) BSI 2016
ಬಾಡಿಹೋಗಿದೆ ದ್ರಾಕ್ಷಾಲತೆ, ದುಬಾರಿಯಾಗಿದೆ ದ್ರಾಕ್ಷಾರಸ, ನರಳುತಿದೆ ನಲಿಯುತ್ತಿದ್ದ ಜನಸಮೂಹ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ರಾಕ್ಷಾರಸವು ಬತ್ತಿಹೋಗುವುದು, ದ್ರಾಕ್ಷಿಯು ಬಾಡುವುದು. ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.