Isaiah 24:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವದಿಲ್ಲ. ಸಂತಸದ ಗದ್ದಲವು ಕೇಳಿಸುವದಿಲ್ಲ. ಆ ಶಬ್ದಗಳೆಲ್ಲಾ ನಿಂತುಹೋಗಿವೆ. ಹಾರ್ಪ್‌ವಾದ್ಯದ ಮತ್ತು ದಮ್ಮಡಿಗಳ ಶಬ್ದವು ನಿಂತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.
Kannada BSI Bible 2016
ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.
Kannada Bible (KNCL) BSI 2016
ನಿಂತುಹೋಗಿದೆ ದಮ್ಮಡಿಗಳ ಹರ್ಷನಾದ, ಕೊನೆಗೊಂಡಿದೆ ಉಲ್ಲಾಸಿಗಳ ಕೋಲಾಹಲ, ಅಡಗಿಹೋಗಿದೆ ಕಿನ್ನರಿಯ ಮಧುರಸ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಮ್ಮಡಿಗಳ ಉತ್ಸಾಹವು ಮುಗಿದಿದೆ. ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.