Isaiah 25:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.
Kannada BSI Bible 2016
ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವದು; ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾನಿದ್ದಲ್ಲೇ ತುಳಿಯಲ್ಪಡುವದು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.