Isaiah 25:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.
Kannada BSI Bible 2016
ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದುರ್ಗವನ್ನು ನಾಶಪಡಿಸಿ ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದ ಹಾಳೂರನ್ನಾಗಿಯೂ ಮಾಡಿದ್ದೀ.
Kannada Bible (KNCL) BSI 2016
ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀರಿ.