Isaiah 25:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.
Kannada BSI Bible 2016
ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.
Kannada Bible (KNCL) BSI 2016
ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.