Isaiah 25:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ, ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಈ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಠಾನ್ನದಿಂದಲೂ ಕೂಡಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.
Kannada BSI Bible 2016
ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲಜನಾಂಗಗಳಿಗೂ ಸಾರವತ್ತಾದ ಮೃಷ್ಟಾನ್ನದಿಂದಲೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಅಣಿಮಾಡುವನು.
Kannada Bible (KNCL) BSI 2016
ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ ಕೊಬ್ಬಿದ ಔತಣವನ್ನೂ, ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು.