Isaiah 25:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಎಲ್ಲಾ ಜನಾಂಗಗಳನ್ನು ಮತ್ತು ಜನರನ್ನು ಮುಚ್ಚುವ ಒಂದು ಮುಸುಕು ಇದೆ. ಆ ಮುಸುಕು ಯಾವದೆಂದರೆ ಮರಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು.
Kannada BSI Bible 2016
ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶೀಯರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವನು.
Kannada Bible (KNCL) BSI 2016
ಸಮಸ್ತ ರಾಷ್ಟ್ರಗಳನ್ನು ಆವರಿಸಿರುವ ಮುಸುಕನ್ನೂ ಸಕಲ ದೇಶಗಳನ್ನು ಮುಚ್ಚಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಸ್ತ ಜನಾಂಗಗಳನ್ನು ಮುಚ್ಚಿರುವ ಪರದೆಯನ್ನೂ, ಸಕಲ ದೇಶದವರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವರು.