Isaiah 25:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.
Kannada BSI Bible 2016
ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.
Kannada Bible (KNCL) BSI 2016
ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.