Isaiah 25:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಜನರು, “ನಮ್ಮ ದೇವರು ಇಲ್ಲಿದ್ದಾನೆ. ಆತನಿಗಾಗಿಯೇ ನಾವು ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ. ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತರಾಗಿ ಸಂತೋಷಿಸುವೆವು” ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.
Kannada BSI Bible 2016
ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.
Kannada Bible (KNCL) BSI 2016
ಇದು ನೆರವೇರಿದಾಗ ಜನರು: “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ!” ಎಂದು ಹೇಳಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.