Isaiah 26:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು: ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ. ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.
Kannada BSI Bible 2016
ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಗೀತವನ್ನು ಹಾಡುವರು - ನಮಗೆ ಬಲವಾದ ಪಟ್ಟಣವಿದೆ. [ಯೆಹೋವನು ತನ್ನ] ರಕ್ಷಣೆಯನ್ನು ಕೋಟೆಯನ್ನಾಗಿಯೂ ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.
Kannada Bible (KNCL) BSI 2016
ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು: ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು: ನಮಗೆ ಬಲವಾದ ಪಟ್ಟಣವಿದೆ, ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ದೇವರು ಮಾಡುವರು.