Isaiah 26:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಷ್ಟರಿಗೆ ದಯೆತೋರಿಸಿದರೆ ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ. ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಕೃತ್ಯಗಳನ್ನೇ ಮಾಡುವರು. ಆ ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.
Kannada BSI Bible 2016
ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.
Kannada Bible (KNCL) BSI 2016
ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾಯವನ್ನು ಆಚರಿಸುವನು ಮತ್ತು ಯೆಹೋವ ದೇವರ ಮಹತ್ವವನ್ನು ಲಕ್ಷಿಸುವುದಿಲ್ಲ.